Back

ⓘ ರಾಮ



                                               

ರಾಮ ರಾಘೋಬ ರಾಣೆ

ರಾಮ ರಾಘೋಬ ರಾಣೆ ಜನಿಸಿದ್ದು ಕರ್ನಾಟಕದ ಕಾರವಾರ ಜಿಲ್ಲೆಯ ಚೆಂಡಿಯಾ ಎಂಬಲ್ಲಿ ಜೂನ್ ೨೬, ೧೯೧೮ರಂದು. ಅವರು ಕೊಂಕಣದ ಮರಾಠಾ ಕ್ಷತ್ರೀಯ ಸಮಾಜಕ್ಕೆ ಸೇರಿದವರು. ಅವರು ಸಾಮಾನ್ಯ ಸೈನಿಕನಾಗಿ ಸೇನೆ ಸೇರಿದರು. ಸೇನೆಯಲ್ಲಿ ಜಾಣರಿಗೆ ಸಾಹಸಿಗಳಿಗೆ ಇರುವ ಸದಾವಕಾಶಗಳನ್ನು ಬಳಸಿಕೊಂಡು ಸೇನೆಯಲ್ಲಿ ಅಧಿಕಾರಿಯಾದರು. ಕಾಪ್ಸ್ ಆಫ್ ಇಂಜಿನಿಯರ್ಸ್ನಲ್ಲಿ ಡಿಸೆಂಬರ್ ೧೫, ೧೯೪೭ರಂದು ರಾಮ ರಾಘೋಬ ರಾಣೆ ಕಮಿಶನ್ಸ್ ಅಧಿಕಾರಿಯಾದರು.

                                               

ಲಕ್ಷ್ಮಣ

ಲಕ್ಷ್ಮಣ - ಹಿಂದೂ ಧರ್ಮಗ್ರಂಥಗಳಲ್ಲಿ ಒಂದಾದ ರಾಮಾಯಣದಲ್ಲಿನ ಶ್ರೀರಾಮನ ತಮ್ಮ.ತಂದೆ ದಶರಥ ತಾಯಿ ಸುಮಿತ್ರೆ.ಶತ್ರುಘ್ನ ಇವನ ಅವಳಿ ತಮ್ಮ. ರಾಮ ವನವಾಸಕ್ಕೆಂದು ಹೊರಟಾಗ ಲಕ್ಷ್ಮಣ ನೂ ಅವನನ್ನು ಹಿಂಬಾಲಿಸುತ್ತಾನೆ. ಕಾಡಿನಲ್ಲಿದ್ದಷ್ಟೂ ದಿನ ತನ್ನ ಅಣ್ಣ ಅತ್ತಿಗೆಯರಾದ ರಾಮ ಮತ್ತು ಸೀತೆಯ ಸೇವೆ ಮಾಡುತ್ತಿರುತ್ತಾನೆ. ರಾವಣನಿಂದ ಪ್ರೇರಿತನಾದ ಮಾರೀಚ ಚಿನ್ನದ ಜಿಂಕೆಯ ವೇಷದಲ್ಲಿ ಸುಳಿದಾಡಿದಾಗ ಸೀತೆ ಆ ಜಿಂಕೆಯನ್ನು ನೋಡಿ ಆಸೆ ಪಡುತ್ತಾಳೆ. ಲಕ್ಷ್ಮಣ ಅದನ್ನು ಹಿಡಿದು ತರಲೆಂದು ಹೋದಾಗ ರಾವಣ ಸೀತೆಯನ್ನು ಅಪಹರಿಸಿಕೊಂಡುಧರ್ಮ|ಹಿಂದೂ ಧರ್ಮಗ್ರಂಥಗಳಲ್ಲಿ" ಒಂದಾದ ರಾಮಾಯಣದಲ್ಲಿನ ಶ್ರೀರಾಮನ ತಮ್ಮ.ತಂದೆ ದಶರಥ,ತಾಯಿ ಸುಮಿತ್ರೆ.ಶತ್ರುಘ್ನ ಇವನ ಅವಳಿ ತಮ್ಮ. ರಾಮ ವನವಾಸಕ್ಕೆಂದು ಹೊರಟಾಗ ಲಕ್ಷ್ಮಣ ನೂ ಅವನನ್ನು ಹಿಂಬಾಲಿಸುತ್ತಾನೆ. ಕಾಡಿನಲ್ಲಿದ ...

                                               

ರಾವಣ

ರಾವಣ ರಾಮಾಯಣದಲ್ಲಿ ಲಂಕೆಯಲ್ಲಿದ್ದ ರಾಕ್ಷಸ ರಾಜ. ರಾವಣನು ಬ್ರಹ್ಮನನ್ನು ಕುರಿತು ಹತ್ತು ಸಾವಿರ ವರ್ಷಗಳು ತಪಸ್ಸು ಮಾಡಿ, ಒಂದು ವಿಶಿಷ್ಟವಾದ ವರವನ್ನು ಪಡೆದಿರುತ್ತಾನೆ. "ದೇವತೆಗಳಿಂದಲೂ, ಬೇರಾವ ಶಕ್ತಿಗಳಿಂದಲೂ ಸಾಯಬಾರದು, ಸಾಮಾನ್ಯ ಮನುಷ್ಯರಿಂದ ಮಾತ್ರ ಸಾಯುವೆನೆಂಬುದೇ ಆ ವರ. ರಾವಣನ ತಂದೆ ವಿಶ್ರವಸ್ ಎಂಬ ಋಷಿ. ತಾಯಿ ಕೈಕೇಸಿ ಎಂಬ ದೈತ್ಯ ವಂಶದ ರಾಣಿ. ರಾವಣನಿಗೆ ಹತ್ತು ತಲೆಗಳು ಮತ್ತು ಇಪ್ಪತ್ತು ಕೈಗಳು. ಬ್ರಹ್ಮನಿಂದ ಚಿರಂಜೀವಿಯಾಗುವ ವರ ಪಡೆದ ರಾವಣ ಲೋಕ ಕಂಟಕನಾಗಿ ಪರಿಣಮಿಸುತ್ತಾನೆ. ಇವನು ಶಿವನ ಪರಮ ಭಕ್ತನು ಹೌದು. ದುಷ್ಟತನದಿಂದ ಮೆರೆಯುತ್ತಿದ್ದ ರಾವಣನನ್ನು ಸಂಹರಿಸಲು ರಾಮ ಭೂಲೋಕದಲ್ಲಿ ಜನ್ಮ ತಾಳುತ್ತಾನೆ. ರಾವಣ ಲಂಕೆಯ ರಾಜನಾದುದರಿಂದ ಇವನನ್ನು ಲಂಕೇಶನೆಂದು ಕರೆಯುವರು. ಇವನಿಗೆ ಇಬ್ಬರು ತಂಗಿಯರು -ಶೂರ್ಪನಖಿ ಮತ್ತು ...

                                               

ಮಾರೀಚ

ರಾಮಾಯಣದಲ್ಲಿ ಬರುವ ರಾಕ್ಷಸನ ಪಾತ್ರ. ರಾಮ,ಲಕ್ಷ್ಮಣರು ವಿಶ್ವಾಮಿತ್ರರಲ್ಲಿ ವಿದ್ಯಾರ್ಜನೆ ಮಾಡುತ್ತಿರುವಾಗ ಸುಬಾಹು ಮತ್ತು ಮಾರೀಚನೆಂಬ ರಾಕ್ಷಸರು ವಿಶ್ವಾಮಿತ್ರರ ಹೋಮ-ಯಾಗಾದಿಗಳಲ್ಲಿ ವಿಘ್ನ ತರುತ್ತಿರುತ್ತಾರೆ. ಆಗ ವಿಶ್ವಾಮಿತ್ರರ ಅಪ್ಪಣೆಯ ಮೇರೆಗೆ ರಾಮ,ಲಕ್ಷ್ಮಣರು ಈ ರಾಕ್ಷಸರ ಮೇಲೆ ದಾಳಿ ಮಾಡಿದಾಗ ಸುಬಾಹು ಮೃತನಾಗುತ್ತಾನೆ ಮತ್ತು ಮಾರೀಚ ಅನಾಮಧೇಯ ದ್ವೀಪವೊಂದರಲ್ಲಿ ಬಚ್ಚಿಟ್ಟುಕೊಳ್ಳುತ್ತಾನೆ.ಮುಂದೆ ರಾಮ-ಲಕ್ಷ್ಮಣ-ಸೀತೆಯರು ಅರಣ್ಯದಲ್ಲಿ ವನವಾಸದಲ್ಲಿದ್ದಾಗ ಇದೇ ಮಾರೀಚ ರಾವಣನಿಗೆ ಸಹಾಯಮಾಡಲೆಂದು ಬಂಗಾರ ವರ್ಣದ ಜಿಂಕೆಯಾಗಿ ಸೀತೆಯ ಕುಟೀರದ ಮುಂದೆ ಸುಳಿದಾಡತೊಡಗಿ ಸೀತೆಯ ಮನಸೂರೆಗೊಳ್ಳುತ್ತಾನೆ. ಪತ್ನಿಯ ಆಸೆಗಾಗಿ ಈ ಮಾಯಾಮೃಗ ದ ಬೆನ್ನತ್ತಿ ಹೋದ ರಾಮ ಕೊನೆಗೆ ಬೇಸತ್ತು ಜಿಂಕೆಯನ್ನು ತೀರ್ಥಹಳ್ಳಿಯ ಸಮೀಪವಿರುವ ಮೃಗವಧೆ ಮಲ್ಲಿಕ ...

                                               

ಸೀತೆ

ಸೀತೆ ಯು ಹಿಂದೂ ಧರ್ಮಗ್ರಂಥಗಳಲ್ಲಿ ಒಂದಾದ ರಾಮಾಯಣದಲ್ಲಿನ ಶ್ರೀ ರಾಮನ ಹೆಂಡತಿ ಮತ್ತು ಮಿಥಿಲೆಯ ರಾಜನಾದ ಜನಕನ ಮಗಳು. ಸೀತೆಯು ಸ್ತ್ರೀ ಸಚ್ಚಾರಿತ್ರ್ಯದ ಪ್ರತಿರೂಪವಾಗಿದ್ದವಳು. ಸೀತೆಯು ರಾಮನನ್ನು ಹಿಂಬಾಲಿಸಿ ವನವಾಸಕ್ಕೆ ಹೊರಡುತ್ತಾಳೆ. ಅಲ್ಲಿ ರಾವಣನಿಂದ ಅಪಹರಣಕ್ಕೆ ಒಳಗಾಗುತ್ತಾಳೆ. ರಾವಣನು ಸೀತೆಯನ್ನು ಲಂಕೆಯಲ್ಲಿ ಬಂಧನದಲ್ಲಿರಿಸಿರುತ್ತಾನೆ. ಮುಂದೆ ರಾಮ ರಾವಣನನ್ನು ಕೊಂದು ಅವನ ಸೆರೆಯಲ್ಲಿದ್ದ ಸೀತೆಯನ್ನು ಕರೆದೊಯ್ಯುತ್ತಾನೆ. ರಾಮಯಣ ಮೂಲವನ್ನ ಅರಸುತ್ತ ಹೋದರೆ ಸೀತೆಯು ರಾವಣನ ಮಗಳೆಂದು ತಿಳಿಸುತ್ತದೆ ಜನಕ ರಾಜನ ಮಗಳಾದುದರಿಂದ ಸೀತೆಯನ್ನು ಜಾನಕಿ ಎಂದೂ ಕರೆಯುತ್ತಾರೆ. ಸೀತೆಯು ಪತಿವ್ರತೆ. ಸೀತಾ ತನ್ನ ಸಮರ್ಪಣೆ, ಸ್ವಯಂ ತ್ಯಾಗ, ಧೈರ್ಯ ಮತ್ತು ಶುದ್ಧತೆಗೆ ಹೆಸರುವಾಸಿಯಾಗಿದ್ದಾಳೆ. ಅವಳು ಅಯೋಧ್ಯೆಯ ರಾಜಕುಮಾರ ರಾಮನನ್ನು ಮದ ...

                                               

ವಿಶ್ವಾಮಿತ್ರ

ವಿಶ್ವಮಿತ್ರ ಅಂದರೆ ವಿಶ್ವಕ್ಕೆ ಗೆಳೆಯ ಎಂದರ್ಥ. ಕ್ಷತ್ರಿಯ ಸೂರ್ಯವಂಶಸ್ಥರಾದ ಇವರನ್ನು ಕೌಶಿಕಯೆಂದು ಕರೆಯಲಾಗುತ್ತದೆ. ದೇವರ ವರದಿಂದ ಇವರ ಹುಟ್ಟು ಕ್ಷತ್ರಿಯ ಕುಲ ರಾಜ ಮನೆತನದಲ್ಲಾದರು, ಬ್ರಹ್ಮರ್ಶಿಗಳಾದರು. ಬ್ರಹ್ಮ ಜಾನೀತಿ ಬ್ರಾಹ್ಮನಃ ವಿಶ್ವಾಮಿತ್ರ - ವಿಶ್ವಾಮಿತ್ರ ಒಬ್ಬ ಋಷಿ. ಕೋಪಕ್ಕೆ ಹೆಸರುವಾಸಿಯಾದವನು. ಅರಣ್ಯದಲ್ಲಿ ತನ್ನ ಹೋಮ,ಹವನಾದಿಗಳಿಗೆ ತೊಂದರೆ ಕೊಡುತ್ತಿದ್ದ ರಾಕ್ಷಸರನ್ನು ಸಂಹರಿಸಲು ರಾಮ,ಲಕ್ಷ್ಮಣರನ್ನು ಅರಣ್ಯಕ್ಕೆ ಕರೆದುಕೊಂಡು ಹೋಗುತ್ತಾನೆ. ಮಾರ್ಗ ಮಧ್ಯದಲ್ಲಿ ವಿಶ್ವಾಮಿತ್ರ ರಾಮನನ್ನು ಮಿಥಿಲಾನಗರಕ್ಕೆ ಕರೆದುಕೊಂಡು ಹೋಗುತ್ತಾನೆ. ಅಲ್ಲಿ ಜನಕರಾಜನು ಸೀತಾ ಸ್ವಯಂವರ ಏರ್ಪಡಿಸಿರುತ್ತಾನೆ. ಅಲ್ಲಿ ರಾಮ ಶಿವ ಧನುಸ್ಸನ್ನು ಮುರಿದು ಸೀತೆಯನ್ನು ವಿವಾಹವಾಗುತ್ತಾನೆ. ಕೌಶಿಕ ಅಥವಾ ವಿಶ್ವಾಮಿತ್ರ ಒಂದು ಕಾಲದಲ್ಲಿ ಅ ...

ರಾಮ
                                     

ⓘ ರಾಮ

  • ಭಾರತದಲ್ಲಿ ರಾಮನ ಆಳ್ವಿಕೆಯ ಕಾಲ ಅತ್ಯಂತ ಸುಭಿಕ್ಷವಾಗಿದ್ದು, ನ್ಯಾಯ, ನೀತಿಗಳಿಂದ ಕೂಡಿದ್ದವೆಂದು ತಿಳಿದು ಬರುತ್ತದೆ. ಅಯೋಧ್ಯೆಯ ರಾಜನಾಗಿದ್ದ ದಶರಥನ ನಾಲ್ಕು ಜನ ಮಕ್ಕಳಲ್ಲಿ ಹಿರಿಯನು ರಾಮ. ಆತನ ತಾಯಿ ಕೌಸಲ್ಯೆ. ಲಕ್ಷ್ಮಣ, ಭರತ, ಶತ್ರುಘ್ನರು ಆತನ ತಮ್ಮಂದಿರು. ಭರತನ ತಾಯಿ ಕೈಕೇಯಿ. ಲಕ್ಷ್ಮಣ ಶತ್ರುಘ್ನರ ತಾಯಿ ಸುಮಿತ್ರೆ.
  • ಆಗ ಆಕೆ ತನ್ನ ಅಣ್ಣ ಲಂಕಾಧಿಪತಿ, ಮಹಾಶಿವಭಕ್ತ ರಾವಣನಿಗೆ ದೂರು ನೀಡಿ ಸೀತೆಯು ಸುಂದರಿಯೆಂದು ಆಕೆಯನ್ನು ನೀನು ವರಿಸಿದರೆ ಬಹಳ ಚೆಂದವೆಂದು ಹೇಳುವಳು. ಆಗ ರಾವಣ ಮಾಯಾವೇಶ ಧರಿಸಿ ಸೀತೆಯನ್ನು ಅಪಹರಿಸುವನು. ಶ್ರೀರಾಮ-ಲಕ್ಷ್ಮಣರು ಸೀತೆಯನ್ನು ಅರಸುತ್ತಾ, ವಾನರರ ಸಹಾಯ ಪಡೆದು ರಾವಣನನ್ನು ಸಂಹರಿಸಿ, ಸೀತೆಯನ್ನು ಅಗ್ನಿಪ್ರವೇಶದ ಮೂಲಕ ಪುನೀತಳನ್ನಾಗಿಸಿ ಮರಳಿ ಅಯೋಧ್ಯೆಗೆ ಕರೆತರುತ್ತಾನೆ.
  • ಶ್ರೀರಾಮನು ತಂದೆ ಮಾತಿಗೆ ಬೆಲೆ ಕೊಟ್ಟು ಸೀತಾ ಮತ್ತು ಲಕ್ಷ್ಮಣರೊಂದಿಗೆ ವನವಾಸಕ್ಕೆ ಹೋಗುವನು 13 ವರ್ಷಗಳ ವನವಾಸ ನಿರಾತಂಕವಾಗಿ ನಡೆಯುವುದು. ಆದರೆ ಶೂರ್ಪನಕಿ ಎಂಬ ರಾಕ್ಷಸಿ ಬಂದು ಇವರ ನೆಮ್ಮದಿಗೆ ಭಂಗ ತರುತ್ತಾಳೆ. ನಂತರ ಆಕೆಯ ಮೂಗು, ಮುಂದಲೆಯನ್ನು ಲಕ್ಷ್ಮಣ ಕೊಯ್ಯುವನು.
  • ಸೀತೆ ರಾಮನ ಹೆಂಡತಿ. ರಾಮನಿಗೆ ಲವ ಮತ್ತು ಕುಶ ಎಂಬ ಇಬ್ಬರು ಮಕ್ಕಳು. ರಾಮನ ಜೀವನ ಚರಿತ್ರೆಯನ್ನು ತಿಳಿಸುವ ಮಹಾಕಾವ್ಯವೇ ರಾಮಾಯಣ. ಶ್ರೀರಾಮಚಂದ್ರ ಕ್ರಿ.ಪೂ.5114 ರ ಜನವರಿ 10 ರಂದು ಜನಿಸಿದನು. ಈತನು ಪುರಾಣ ಪುರುಷ ಮಾತ್ರವಲ್ಲ ಈತನ ಇತಿಹಾಸದ ಬಗ್ಗೆಯೂ ಸಾಕಷ್ಟು ಮಾಹಿತಿ ಲಭ್ಯವಾಗಿದೆ. ಪ್ರಖ್ಯಾತ ಖಗೋಳಜ್ಞರು ಈ ಬಗ್ಗೆ ಅನೇಕ ಅನ್ವೇಷಣೆಗಳನ್ನು ಮಾಡುತ್ತಿದ್ದಾರೆ.
                                     

1. ರಾಮ ಪುರಾಣ

  • ಮಂತ್ರಿಗಳು ಹಾಗೂ ಪುರೋಹಿತರ ಸಲಹೆಯ ಮೇರೆಗೆ ಪುತ್ರಸಂತಾನಕ್ಕಾಗಿ ಪುತ್ರಕಾಮೇಷ್ಟಿ ಯಜ್ಞವನ್ನು ಮಾಡಿದನು. ವಿಷ್ಣು ದಶರಥನ ಜ್ಯೇಷ್ಠ ಪುತ್ರನಾಗಿ ಜನಿಸಲು ನಿರ್ಧರಿಸಿ ದೈವೀ ಪುರುಷನೊಬ್ಬನನ್ನು ಯಜ್ಞಕುಂಡದಲ್ಲಿ ಹುಟ್ಟುವಂತೆ ಮಾಡಿದನು. ಈ ದೈವೀ ಪುರುಷ ದಶರಥನಿಗೆ ಅಮೃತವಿದ್ದ ಚಿನ್ನದ ಕಲಶವೊಂದನ್ನು ನೀಡಿ ತನ್ನ ರಾಣಿಯರಿಗೆ ಅದನ್ನು ನೀಡುವಂತೆ ಹೇಳಿದನು. ದಶರಥನು ಅದನ್ನು ತನ್ನ ಮೂವರು ರಾ‍ಣಿಯರಾದ ಕೌಸಲ್ಯೆ, ಸುಮಿತ್ರೆ ಮತ್ತು ಕೈಕೇಯಿ ಇವರ ನಡುವೆ ಹಂಚಿದನು.
  • ಕಾಲ ಕ್ರಮೇಣ ಅವರು ಗರ್ಭಿಣಿಯರಾಗಿ ನಾಲ್ಕು ಮಕ್ಕಳಿಗೆ ಜನ್ಮವಿತ್ತರು. ರಾಣಿ ಕೌಸಲ್ಯೆಗೆ ಹಿರಿಯ ಮಗನಾಗಿ ರಾಮನೂ, ಕೈಕೇಯಿಗೆ ಭರತನೂ ಮತ್ತು ಲಕ್ಷ್ಮಣ ಮತ್ತು ಶತ್ರುಘ್ನರು ಸುಮಿತ್ರೆಗೆ ಜನಿಸಿದರು. ಈ ಬಾಲಕರು ವಸಿಷ್ಠರಿಂದ ಶಾಸ್ತ್ರಗಳನ್ನೂ, ಬಿಲ್ಲುವಿದ್ಯೆಯನ್ನೂ ಕಲಿಯುತ್ತ ಬೆಳೆದರು. ಒಂದು ದಿನ ವಿಶ್ವಾಮಿತ್ರರು ರಾಜ್ಯಕ್ಕೆ ಬಂದು ದಶರಥನಲ್ಲಿ ತಮ್ಮ ಯಜ್ಞ ಯಾಗಾದಿಗಳಿಗೆ ಭಂಗ ತರುತ್ತಿರುವ ರಾಕ್ಷಸರಿಂದ ತಮ್ಮನ್ನು ಕಾಪಾಡಲು ರಾಮನನ್ನು ಕಳಿಸಬೇಕೆಂದು ಕೋರಿದರು.
  • ಅಂಥ ವರವನ್ನು ಪಡೆದು ರಾವಣನು ತನ್ನ ಸಹಚರ ರಾಕ್ಷಸರೊಡಗೂಡಿ ಭೂಸಂಹಾರಕ್ಕೆ ತೊಡಗಿ, ಶಿಷ್ಟಜನರಿಗೆ ಅದರಲ್ಲೂ ಬ್ರಾಹ್ಮಣರಿಗೆ ಅವರ ಜಪ-ತಪಗಳಿಗೆ ಉಪದ್ರವ ಕೊಡಲಾರಂಭಿಸಿದನು. ಇದನ್ನು ನೋಡಿ ಎಲ್ಲ ದೇವತೆಗಳು ಭೂಮಿಯನ್ನೂ ತಮ್ಮನ್ನು ಈ ದುಷ್ಟನಿಂದ ಕಾಪಾಡು ಎಂದು ಬ್ರಹ್ಮನ ಮೊರೆ ಹೊಕ್ಕರು.
  • ಒಲ್ಲದ ಮನ್ಸಸ್ಸಿನಿಂದ ವಿಶ್ವಾಮಿತ್ರರೊಡನೆ ರಾಮ ಲಕ್ಷ್ಮಣರನ್ನು ಕಳಿಸಿಕೊಡಲು ಅವನು ಒಪ್ಪಿದನು. ಈ ಸೋದರರು ತಮ್ಮ ಕರ್ತವ್ಯವನ್ನು ಪೂರೈಸಲು ವಿಶ್ವಾಮಿತ್ರನು ಸಂತೋಷಪಟ್ಟು ಅವರಿಗೆ ಅನೇಕ ದಿವ್ಯಾಸ್ತ್ರಗಳನ್ನು ಅನುಗ್ರಹಿಸಿದನು. ಹಿಂತಿರುಗುವಾಗ ವಿಶ್ವಾಮಿತ್ರರೊಡನೆ ಪ್ರಯಾಣದ ಕೊನೆಯಲ್ಲಿ ರಾಮನು ಮಿಥಿಲಾ ರಾಜ್ಯಕ್ಕೆ ಬಂದನು.
  • ಅವನು ಜನಕನ ಆಸ್ಥಾನಕ್ಕೆ ಬಂದಾಗ ಜನಕನು ಅವನ ಲಾವಣ್ಯಕ್ಕೆ ಮಾರು ಹೋದನು. ಐದು ಸಾವಿರ ಜನರು ಆ ಬಿಲ್ಲನ್ನು ಎಂಟು ಗಾಲಿಗಳ ರಥದಲ್ಲಿ ಆಸ್ಥಾನಕ್ಕೆ ಎಳೆದು ತಂದರು. ರಾಮನು ಬಹಳ ಸುಲಭವಾಗಿ ಅದನ್ನು ಮುರಿಯುವಷ್ಟು ಬಗ್ಗಿಸಿದನು. ಜನಕನು ಸಂತಸದಿಂದ ತನ್ನ ಲಾವಣ್ಯವತಿ ಮಗಳನ್ನು ರಾಮನಿಗೆ ಮದುವೆ ಮಾಡಿಕೊಟ್ಟನು. ಭವ್ಯವಾದ ಮದುವೆ ಸಮಾರಂಭದ ನಂತರ ನವಜೋಡಿಯು ಅಯೋಧ್ಯೆಗೆ ಪ್ರಯಾಣ ಬೆಳೆಸಿತು.
  • ಅಲ್ಲಿ ಜನಕ ಮಹಾರಾಜನು ತನ್ನ ಮಗಳು ಅಪ್ರತಿಮ ಸುಂದರಿ ಸೀತೆಯನ್ನು ತನ್ನ ಆಸ್ಥಾನದಲ್ಲಿದ್ದ ಶಿವನ ಬಹಳ ಬಲಿಷ್ಠವಾದ ಧನುಸ್ಸನ್ನು ಎದೆಯೀರಿಸಿದವನಿಗೆ ತನ್ನ ಮಗಳನ್ನು ಮದುವೆ ಮಾಡಿ ಕೊಡಲಿರುವ ಸ್ವಯಂವರವನ್ನು ನಡೆಸುತ್ತಿರುವುದನ್ನು ಅರಿತನು. ಅನೇಕ ವಿವಾಹೇಚ್ಛುಗಳು ಪ್ರಯತ್ನಿಸಿ ಸೋತಿದ್ದ ಈ ಕಾರ್ಯವನ್ನು ಸಾಧಿಸಲು ರಾಮನು ನಿಶ್ಚಯಿಸಿದನು.
  • ಬ್ರಹ್ಮನು ವಿಷ್ಣುವಿನ ಬಳಿಸಾರಿ ದೇವತೆಗಳ ಚಿಂತೆಯನ್ನು ಅರುಹಿ, ರಾವಣನು ಮನುಷ್ಯರಿಂದ ಅಥವಾ ಪ್ರಾಣಿಗಳಿಂದ ಮರಣ ಹೊಂದದ ವರವನ್ನು ಪಡೆದಿಲ್ಲದಿರುವುದರಿಂದ ವಿಷ್ಣುವೇ ಮಾನವನಾಗಿ ಅವತಾರವೆತ್ತಿ ರಾವಣನನ್ನು ಸಂಹರಿಸಬೇಕೆಂದು ಕೇಳಿಕೊಂಡನು. ಈ ಮಧ್ಯೆ ಕೋಸಲವನ್ನು ಆಳುತ್ತಿದ್ದ ಅಯೋಧ್ಯೆಯ ರಾಜ ದಶರಥನಿಗೆ ಮಕ್ಕಳಿಲ್ಲದ್ದರಿಂದ ತನ್ನ ಉತ್ತರಾಧಿಕಾರಿಯ ಬಗ್ಗೆ ಚಿಂತೆಯಲ್ಲಿದ್ದನು.
  • ಮಿಥಿಲೆಯ ಸೀತಾ ಸ್ವಯಂವರದಲ್ಲಿ ರಾಮ ಶಿವನ ಧನುಸ್ಸನ್ನು ಮುರಿಯುತ್ತಿರುವುದು, ರಾಜಾ ರವಿವರ್ಮ ರಚನೆಯ ಚಿತ್ರ ವಿಶ್ವದ ಸೃಷ್ಟಿಕರ್ತನಾದ ಬ್ರಹ್ಮನು ರಾಕ್ಷಸರ ರಾಜ ರಾವಣನ ಘೋರ ತಪಸ್ಸಿಗೆ ಮೆಚ್ಚಿ ಅವನನ್ನು ದೇವತೆಗಳು, ರಾಕ್ಷಸರು ಅಥವಾ ಯಕ್ಷಕಿನ್ನರರು ಕೊಲ್ಲಲಾಗದೆಂಬ ವರವನ್ನು ಕೊಟ್ಟಿದ್ದನು. ಅದನ್ನು ಅವನು ಹಿಂತೆಗೆದುಕೊಳ್ಳುವದು ಸಾಧ್ಯವಿರಲಿಲ್ಲ.
                                     

2. ರಾಮನ ವನವಾಸ

  • ಆದರ್ಶ ಪುತ್ರನಾದ ರಾಮ, ಸಿಂಹಾಸನದ ಮೇಲೆ ತನಗಿದ್ದ ಹಕ್ಕನ್ನು ಬಿಟ್ಟುಕೊಟ್ಟು ವನವಾಸಕ್ಕೆ ಹೊರಡಲು ಸಿದ್ಧನಾದನು. ಅವನ ನಿಷ್ಠಾವಂತ ಪತ್ನಿ ಸೀತೆ ಮತ್ತು ತಮ್ಮ ಲಕ್ಷ್ಮಣ, ರಾಮನ ಜೊತೆ ಹೊರಡಲು ನಿರ್ಧರಿಸಿದರು. ದಶರಥ ದುಃಖದಲ್ಲಿದ್ದಂತೆ ರಾಮ, ಅಯೋಧ್ಯೆಯ ಪರಿತಪ್ತ ಜನರಿಂದ ಹಿಂಬಾಲಿಸಲ್ಪಟ್ಟು ವನವಾಸಕ್ಕೆ ತೆರಳಿದನು. ಸ್ವಲ್ಪ ಕಾಲಾನಂತರ ದಶರಥ ದುಃಖದಿಂದ ಮರಣವನ್ನಪ್ಪಿದನು.
  • ರಾಜ ದಶರಥನು ತನ್ನ ಹಿರಿಯ ಮಗ ಹಾಗೂ ಪದ್ಧತಿಯಂತೆ ಉತ್ತರಾಧಿಕಾರಿಯಾದ ರಾಮನನ್ನು ಯುವರಾಜನನ್ನಾಗಿ ಮಾಡಲು ನಿರ್ಧರಿಸಿದನು. ಅವನ ಪ್ರಜೆಗಳು ಈ ಘೋಷಣೆಯನ್ನು ಸಂತಸದಿಂದ ಸ್ವಾಗತಿಸಿದರು. ಇಡೀ ನಗರವು ಈ ಸಂಬಂಧದ ಉತ್ಸವವನ್ನೂ ವಿಜೃಂಭಣೆಯಿಂದ ಆಚರಿಸಲು ಸಿದ್ಧತೆಗಳಲ್ಲಿ ತೊಡಗಿತು. ದಶರಥನು ಈ ಆಚರಣೆಗಳ ಸಂಬಂಧ ಚರ್ಚಿಸಲು ತನ್ನ ಪತ್ನಿ ಕೈಕೇಯಿ ಇದ್ದಲ್ಲಿಗೆ ಹೋದನು.
  • ಆದರೆ ದಾಸಿ ಮಂಥರೆಯಿಂದ ದುರ್ಬೋಧನೆಗೊಳಗಾಗಿ ಯುವರಾಜನಾಗುತ್ತಿರುವುದು ಪ್ರವಾಸದಲ್ಲಿರುವ ತನ್ನ ಮಗ ಭರತನಲ್ಲ, ಅದು ಕೌಸಲ್ಯೆಯ ಮಗ ರಾಮ ಎಂದು ಅಸೂಯೆಪಟ್ಟು ದುಃಖಿಸಿದಳು. ದಶರಥನು ಬಂದಾಗ ಅವಳು ಅಂತಃಪುರದಲ್ಲಿ ಕಣ್ಣೀರುಗರೆಯುತ್ತಿದ್ದಳು. ಚಿಂತಿತನಾದ ದಶರಥನ ಪ್ರಶ್ನೆಗಳಿಗೆ ಉತ್ತರವಾಗಿ ಕೈಕೇಯಿ, ಅನೇಕ ವರ್ಷಗಳ ಹಿಂದೆ ದಶರಥ ತನಗಿತ್ತಿದ್ದ ಎರಡು ವರಗಳನ್ನು ನೆನಪಿಸಿದಳು. ಈ ವರಗಳನ್ನು ಪೂರೈಸಿದರೆ ಪ್ರಸನ್ನಳಾಗುವುದಾಗಿ ಹೇಳಿದಳು.
  • ಇದಕ್ಕೆ ಪೂರಕವಾಗಿ ಅವಳು, ಮೊದಲನೆಯದಾಗಿ, ತನ್ನ ಮಗ ಭರತನನ್ನು ಯುವರಾಜನಾಗಿ ನೇಮಿಸಬೇಕೆಂದೂ, ಎರಡನೆಯದಾಗಿ, ರಾಮನನ್ನು ಹದಿನಾಲ್ಕು ವರ್ಷಕಾಲ ಘೋರವಾದ ದಂಡಕಾರಣ್ಯಕ್ಕೆ ವನವಾಸಕ್ಕೆ ಕಳಿಸಬೇಕೆಂದೂ ಕೇಳಿದಳು. ದುಃಖಿತನಾದ ದಶರಥ, ಆದಾಗ್ಯೂ ತನ್ನ ವಚನವನ್ನು ಪರಿಪಾಲಿಸಿಕೊಳ್ಳಲು ನಿರ್ಧರಿಸಿದನು.
                                     

3. ವಾನರ ಸಾಮ್ರಾಜ್ಯ

  • ಸಂಪಾತಿಯು ಅಂಗವೈಕಲ್ಯದಿಂದಾಗಿ ಹಾರಲು ಅಸಮರ್ಥನಾಗಿದ್ದನು. ಅವನು ಸೂರ್ಯನ ಅತಿ ಸಮೀಪಕ್ಕೆ ಹಾರಿದ್ದರಿಂದ ಅವನ ರೆಕ್ಕೆಗಳು ಸುಟ್ಟು ಹೋಗಿದ್ದವು. ಬಲಶಾಲಿಯಾದ ಜಟಾಯುವು ಅವನನ್ನು ಸಾವಿನಿಂದ ರಕ್ಷಿಸಿದ್ದನು. ಇಬ್ಬರಲ್ಲಿ ಜಟಾಯು ದೇಹಬಲದಿಂದ ಗಟ್ಟಿಗನಾದರೂ ಸಂಪಾತಿಗೆ ಕಣ್ಣಿನ ಹೆಚ್ಚಿನ ದೃಷ್ಟಿಯಿದ್ದು ನೂರಾರು ಯೋಜನಗಳಷ್ಟು ದೂರ ನೋಡಬಲ್ಲವನಾಗಿದ್ದನು.
  • ರಾವಣನು ತನ್ನ ಸೋದರನನ್ನು ಕೊಂದದ್ದನ್ನು ಕೇಳಿ ಅವನು ವಾನರರಿಗೆ ಸಹಾಯ ಮಾಡಲು ಒಪ್ಪಿದನು. ಅನತಿಕಾಲದಲ್ಲೇ ಅವನು ಸೀತೆಯನ್ನು ದಕ್ಷಿಣ ದಿಕ್ಕಿನಲ್ಲಿರುವದಾಗಿ ಪತ್ತೆ ಹಚ್ಚಿದನು. ಅವಳು ದಕ್ಷಿಣದಲ್ಲಿ ಸಮುದ್ರದಾಚೆಗಿನ ಲಂಕಾದ್ವೀಪದಲ್ಲಿನ ಅಶೋಕವನವೊಂದರಲ್ಲಿ ಸೆರೆಯಾಗಿರುವುದನ್ನು ನೋಡಿ ಹೇಳಿದನು.
  • ಪರಸ್ಪರ ಕಾಳಗದಲ್ಲಿ ರಾಮನ ಸಹಾಯ ಪಡೆದ ಸುಗ್ರೀವನಿಂದ ವಾಲಿ ಮಡಿಯುತ್ತಾನೆ. ಸಹಾಯ ಮಾಡಿದ ರಾಮನೊಂದಿಗೆ ಸುಗ್ರೀವ ತನ್ನ ಸೈನ್ಯ ವನ್ನು ಕೂಡಿ ಲಂಕೆಯೆಡೆಗೆ ಹೊರಡುತ್ತಾನೆ. ರಾಮ, ಸುಗ್ರೀವರು ಸೀತೆಯನ್ನು ಹುಡುಕಲು ತಮ್ಮ ವಾನರಸೇನೆಯನ್ನು ನಾನಾ ದಿಕ್ಕಿಗೆ ಕಳಿಸಿದರು.ಅವರು ರಾವಣನಿಂದ ಹತನಾದ ಜಟಾಯುವಿನ ಸೋದರ, ಸಂಪಾತಿಯನ್ನು ಭೇಟಿಯಾಗುವವರೆಗೆ ಅವರ ಪ್ರಯತ್ನಗಳಿಗೆ ವಿಶೇಷ ಫಲ ದೊರೆಯಲಿಲ್ಲ.
  • ತಮ್ಮ ಹುಡುಕಾಟವನ್ನು ಮುಂದುವರೆಸಿ ರಾಮ ಲಕ್ಷ್ಮಣರು ಕಿಷ್ಕಿಂದೆಯ ವಾನರ ರಾಜನಾದ ಸುಗ್ರೀವ ಹಾಗೂ ಹನುಮಂತನನ್ನು ಭೇಟಿಯಾಗುತ್ತಾರೆ. ಹನುಮಂತ ಸುಗ್ರೀವನ ಸೈನ್ಯಕ್ಕೆ ಸೇನಾಧಿಪತಿ. ಸೀತೆ ರಾವಣನ ರಥದಿಂದ ಎಸೆದ ಆಭರಣಗಳು ವಾನರರಿಗೆ ದೊರೆತಿರುತ್ತದೆ. ತನ್ನ ಅಣ್ಣ ವಾಲಿಯಿಂದ ಸಾಮ್ರಾಜ್ಯದಿಂದ ಹೊರಗಟ್ಟಲ್ಪಟ್ಟ ಸುಗ್ರೀವ ರಾಮನ ಸಹಾಯ ಪಡೆಯುತ್ತಾನೆ.


                                     

4. ಲಂಕೆಯಲ್ಲಿ ಹನುಮಂತ

  • ಸುಗ್ರೀವನು ತನ್ನ ವಾನರ ಸೈನ್ಯವನ್ನು ಅಂಗದನ ನೇತೃತ್ವದಲ್ಲಿ ದಕ್ಷಿಣಕ್ಕೆ ಕಳಿಸಿದನು. ಹನುಮಂತನು ಅಂಗದನ ಸೇನಾಪತಿಯಾಗಿ ತೆರಳಿದನು. ಅವರು ದಕ್ಷಿಣದಲ್ಲಿ ಬಹುದೂರ ಹೋದ ಮೇಲೆ ತಮ್ಮ ಮತ್ತು ಲಂಕಾದ್ವೀಪದ ನಡುವೆ ಮಹಾಸಾಗರವನ್ನು ಕಂಡರು. ಆ ಸಮುದ್ರವನ್ನು ದಾಟುವ ಬಗೆ ಹೇಗೆಂದು ತಿಳಿಯದಾದರು.
  • ತನ್ನ ಅನ್ವೇಷಣೆಯನ್ನು ಮುಂದುವರಿಸಿ ಕೊನೆಗೆ ಆಶೋಕವನದಲ್ಲಿ ಮರದ ಕೆಳಗೆ ರಾಕ್ಷಸಿಯರಿಂದ ಸುತ್ತುವರೆಯಲ್ಪಟ್ಟು ದುಃಖದಿಂದ ಕಳೆಗುಂದಿದ ಸೌಂದರ್ಯವುಳ್ಳ ಸೀತೆಯನ್ನು ನೋಡಿದನು. ಸಣ್ಣ ಕಪಿಯೊಂದರ ವೇಷ ತಾಳಿ ಹನುಮಂತನು ಮರದಿಂದ ಕೆಳಗೆ ಜಿಗಿದು ಅವಳಿಗೆ ರಾಮನ ಉಂಗುರವನ್ನು ಕೊಟ್ಟು ಅವಳಿಂದ ಒಂದು ಉಂಗುರವನ್ನು
  • ತನ್ನ ಸೈನಿಕರಿಗೆ ಅಲ್ಲಿಯೇ ಇರಹೇಳಿ ಹನುಮಂತನು ತನ್ನ ದೇಹವನ್ನು ಹಿಗ್ಗಿಸಿ ಮಹಾರೂಪ ತಾಳಿ ಅಪಾರ ಜಲರಾಶಿಯನ್ನು ಜಿಗಿದು ದಾಟಿ ತ್ರಿಕೂಟ ಪರ್ವತದ ಮೇಲೆ ಇಳಿದು ಲಂಕಾಪಟ್ಟಣದತ್ತ ನೋಡಿದನು. ನಗರಕ್ಕೆ ಭಾರೀ ಪಹರೆ ಇದ್ದದ್ದರಿಂದ ಬೆಕ್ಕಿನ ರೂಪತಾಳಿ ನಗರವನ್ನು ನುಸುಳಿ ನಗರವನ್ನು ವೀಕ್ಷಿಸಿದನು. ರಾವಣನು ತನ್ನ ಅಂತಃಪುರದಲ್ಲಿ ಸುಂದರ ಸ್ತ್ರೀಯರಿಂದ ಸುತ್ತುವರಿಯಲ್ಪಟ್ಟಿದ್ದನು. ಆದರೆ ಅಲ್ಲಿ ಸೀತೆ ಇರಲಿಲ್ಲ.

ತೆಗೆದುಕೊಂಡನು.

  • ಅವಳನ್ನು ತನ್ನೊಡನೆ ಕೊಂಡೊಯ್ಯಲು ಸಿದ್ಧವಾಗಲು, ರಾಮನೇ ತನ್ನನ್ನು ರಕ್ಷಿಸಲು ಬರಬೇಕೆಂದು ಹೇಳಿ ತನ್ನನ್ನು ಹುಡುಕಿದ್ದಕ್ಕೆ ಸಾಕ್ಷಿಯಾಗಿ ಒಂದು ಬೆಲೆಯುಳ್ಳ ವಜ್ರವನ್ನು ರಾಮನಿಗೆ ಕೊಡುವುದಕ್ಕಾಗಿ ಹನುಮಂತನಿಗೆ ಕೊಟ್ಟಳು. ಅವರು ಮಾತನಾಡುತ್ತಿರುವಾಗ ಅಲ್ಲಿ ಬಂದ ರಾವಣನು ಅವಳ ಮನವೊಲಿಸಲು ವ್ಯರ್ಥ ಪ್ರಯತ್ನ ಮಾಡಿ ಅವಳು ಇನ್ನೆರಡು ತಿಂಗಳಲ್ಲಿ ತನ್ನ ವಶವಾಗದಿದ್ದರೆ, ತನ್ನ ಬೆಳಗಿನ ಉಪಾಹಾರಕ್ಕಾಗಿ ಅವಳ ಅಂಗಾಂಗಗಳನ್ನು ತುಂಡರಿಸುವುದಾಗಿ ಬೆದರಿಸಿದನು.
  • ಬಾಲಕ್ಕೆ ಬೆಂಕಿ ಹತ್ತಿದ ನಂತರ ಹನುಮಂತನು ತನ್ನ ಶರೀರವನ್ನು ಸಣ್ಣದಾಗಿ ಮಾಡಿಕೊಂಡು ಕಟ್ಟುಗಳಿಂದ ಪಾರಾಗಿ ಮನೆಗಳ ಮೇಲೆಲ್ಲ ಜಿಗಿಯುತ್ತ ಹೋಗಿ ಲಂಕೆಯಲ್ಲೆಲ್ಲ ಬೆಂಕಿಯನ್ನು ಹರಡಿದನು. ಅವನು ರಾಮ, ಸುಗ್ರೀವರಿದ್ದಲ್ಲಿಗೆ ಮರಳಿ ಬಂದು ಸೀತೆಯು ಬಂಧನದಲ್ಲಿರುವುದನ್ನು ತಿಳಿಸಿ ಯುದ್ಧಸಿದ್ಧತೆಗೆ ತೊಡಗಿದನು.
  • ರಾವಣನ ಮಾತಿನಿಂದ ಸಿಟ್ಟಿಗೆದ್ದ ಹನುಮಂತನು ಮಾವಿನ ತೋಟವನ್ನು ಹಾಳು ಮಾಡಿದನು. ಅವನನ್ನು ರಾಕ್ಷಸರು ಬಂಧಿಸಿ ರಾವಣನ ಮುಂದೆ ಕೊಂಡೊಯ್ದರು. ಹನುಮಂತನು ತಾನು ರಾಮನ ದೂತನೆಂದು ಹೇಳಿ, ಸೀತೆಯನ್ನು ರಾಮನಿಗೆ ಒಪ್ಪಿಸು ಇಲ್ಲವೆ ರಾಮನ ಕ್ರೋಧಕ್ಕೆ ಬಲಿಯಾಗು ಎಂದು ಹೇಳಿದನು. ಅವನ ಮಾತುಗಳನ್ನು ಕೇಳಿ ಸಿಟ್ಟಿಗೆದ್ದ ರಾವಣನು ಅವನನ್ನು ಕೊಲ್ಲಲು ಆಜ್ಞೆ ಮಾಡಿದನು.
  • ಆಗ ರಾವಣನ ನ್ಯಾಯಪರ ತಮ್ಮನಾದ ವಿಭೀಷಣನು ಮಧ್ಯ ಪ್ರವೇಶಿಸಿ ರಾವಣನಿಗೆ ಶಾಸ್ತ್ರಗಳಲ್ಲಿ ಹೇಳಿದ ಪ್ರಕಾರ ದೂತನನ್ನು ಕೊಲ್ಲುವುದು ಅನುಚಿತ ಎಂದು ಹೇಳಿ ಅವನ ಅಪರಾಧಕ್ಕೆ ತಕ್ಕ ಶಿಕ್ಷೆ ವಿಧಿಸಲು ಸಲಹೆ ಮಾಡಿದನು. ಇದಕ್ಕೆ ರಾವಣನು ಒಪ್ಪಿ ತನ್ನ ರಾಕ್ಷಸ ಸೇವಕರಿಗೆ ಹನುಮಂತನ ಬಾಲಕ್ಕೆ ಬೆಂಕಿ ಹಚ್ಚಲು ಆಜ್ಞೆ ಮಾಡಿದನು.
                                     

5. ಲಂಕೆಯಲ್ಲಿ ಯುದ್ಧ

  • ಸಮುದ್ರಕ್ಕೆ ಸೇತುವೆಯನ್ನು ಕಟ್ಟದೆ ಹೋದರೆ, ಹನುಮಂತನ ಹೊರತು ಬೇರಾರೂ ಅದನ್ನು ದಾಟಲಾರರು ಎಂದು ರಾಮನು ನಿರ್ಣಯಿಸಿದನು. ವ್ಯರ್ಥವಾಗಿ ಮೂರು ದಿನ ಕಾದರೂ ತನ್ನನ್ನು ಅಲಕ್ಷಿಸಿದ್ದಕ್ಕಾಗಿ ಸಿಟ್ಟಿಗೆದ್ದ ರಾಮನು ತನ್ನ ಬಾಣಗಳನ್ನು ಸಮುದ್ರಕ್ಕೆ ಗುರಿಯಿಡಲು ವರುಣನು ಪ್ರತ್ಯಕ್ಷವಾದನು. ಸಮುದ್ರದೇವತೆಯಾದ ಅವನು ಸೇತುವೆಯನ್ನು ಕಟ್ಟುವದಾದರೆ ನೆಲದ ಮೇಲೇ ಕಟ್ಟಿದಷ್ಟು ದೃಢವಾಗಿರುವಂತೆ ಸೇತುವೆಗೆ ಅಲೆಗಳು ಅನುಕೂಲವಾಗಿರುವಂತೆ ಏರ್ಪಡಿಸುವದಾಗಿ ಮಾತು ಕೊಟ್ಟನು. * ರಾಮನು ಸೈನ್ಯದೊಂದಿಗೆ ಬರುವ ವಾರ್ತೆಯಿಂದ ಲಂಕೆಯಲ್ಲಿ ಭೀತಿಯ ವಾತಾವರಣ ಉಂಟಾಯಿತು. ರಾವಣನ ತಮ್ಮನಾದ ವಿಭೀಷಣನು, ರಾಮನೊಂದಿಗೆ ಸಂಧಿ ಮಾಡಿಕೊಳ್ಳಲು ರಾವಣನಿಗೆ ಸಲಹೆಯಿತ್ತಾಗ ರಾವಣನು ಅತೀವ ಸಿಟ್ಟಿಗೆದ್ದದ್ದರಿಂದ, ರಾಮನನ್ನು ಸೇರಿಕೊಂಡನು. (Ẋನಂತರ ನಡೆದ ಘನಘೋರ ಯುದ್ಧದಲ್ಲಿ ದೇವತೆಗಳೂ ಭಾಗವಹಿಸಿದರು.
  • ಆದರೆ ಅವಳ ಸಂತೋಷ ತಾತ್ಕಾಲಿಕವಾಗಿತ್ತು. ತಲೆ ತಗ್ಗಿಸಿ ಅವಳನ್ನು ಬರಮಾಡಿಕೊಂಡ ರಾಮ, ರಾವಣನ ಮನೆಯಲ್ಲಿ ಅವಳು ಇದ್ದುದರಿಂದ ತನ್ನ ಪತ್ನಿಯಾಗಲು ಅವಳು ತಕ್ಕವಳಾಗಿ ಉಳಿದಿಲ್ಲವೆಂದು ಹೇಳಿದ. ತನ್ನ ಪಾತಿವ್ರತ್ಯದ ಬಗ್ಗೆ ಅವನಿಗೆ ಭರವಸೆಯಿತ್ತಳು ಸೀತೆ. ಆದರೂ ರಾಮನ ಅನುಮಾನ ಮುಂದುವರೆದಿದ್ದರಿಂದ ಸೀತೆ ಆತ್ಮಹತ್ಯೆ ಮಾಡುವ ನಿರ್ಧಾರ ಮಾಡಿ ತನ್ನ ಚಿತೆಯನ್ನು ನಿರ್ಮಿಸಬೇಕೆಂದು ಹೇಳಿದಳು. ಎಲ್ಲ ಪ್ರೇಕ್ಷಕರ ಅಂತಃಕರಣವೂ ಸೀತೆಯ ಕಡೆಗಿದ್ದಿತು.
  • ಏನು ಮಾಡಬೇಕೆಂದು ತೋಚದೆ ಇದ್ದ ರಾಮನಿಗೆ ರಾವಣನ ದೇಹದತ್ತ ಗುರಿಯಿಡುವಂತೆ ವಿಭೀಷಣ ತಿಳಿಸಿಕೊಟ್ಟ.ಈ ಉಪಾಯ ಫಲಿಸಿ ರಾವಣ ಉರುಳಿ ಬಿದ್ದಂತೆ, ಆಕಾಶದಿಂದ ಪುಷ್ಪಗಳು ರಾಮನ ಮೇಲೆ ಮಳೆಗರೆದವು. ಅವನ ಕಿವಿಗಳಲ್ಲಿ ದೈವೀ ಸಂಗೀತ ಅನುರಣಿಸಿತು. ರಾವಣನ ಪತ್ನಿ ಮಂಡೋದರಿಯ ವಿಲಾಪವನ್ನು ಕೇಳಿದ ರಾಮ ರಾವಣನಿಗೆ ಶಾಸ್ತ್ರೋಕ್ತ ಅಂತ್ಯ ಸಂಸ್ಕಾರವನ್ನು ಮಾಡಿ ಲಂಕೆಯನ್ನು ಪ್ರವೇಶಿಸಿದನು. ಸಂತೋಷದಿಂದ ಬೀಗುತ್ತಿದ್ದ ಸೀತೆ ರಾಮನ ಜೊತೆಗೂಡಿದಳು.
  • ವಿಷ್ಣು ಮತ್ತು ಇಂದ್ರ, ರಾಮನ ಪಕ್ಷವನ್ನೂ ಅಸುರರು ರಾವಣನ ಪಕ್ಷವನ್ನೂ ವಹಿಸಿದರು. ಎರಡೂ ಪಕ್ಷಗಳಿಗೆ ಮಿಶ್ರಫಲಗಳೊಡನೆ ಯುದ್ಧ ಸ್ವಲ್ಪ ಕಾಲ ನಡೆದ ನಂತರ ರಾಮ-ರಾವಣರ ನಡುವೆ ನೇರ ಹೋರಾಟದ ಮೂಲಕ ಯುದ್ಧದ ಫಲಿತಾಂಶವನ್ನು ಘೋಷಿಸುವುದೆಂದು ತೀರ್ಮಾನಿಸ ಲಾಯಿತು. ಈ ಕಾಳಗದ ತೀವ್ರತೆಯಿಂದ ದೇವ-ದೇವತೆಗಳೂ ಭೀತರಾದರು. ರಾಮನ ಪ್ರತಿಯೊಂದು ಬಾಣವೂ ರಾವಣನ ಒಂದು ತಲೆ ಕತ್ತರಿಸಿದರೂ ಅದು ಮತ್ತೆ ಬೆಳೆಯುತ್ತಿತ್ತು.
  • ಸೀತೆ ಚಿತೆಯನ್ನೇರಿ ಕೆಲ ಕ್ಷಣಗಳಲ್ಲಿಯೇ ಅಗ್ನಿ ಆಕೆಯನ್ನು ತನ್ನ ಬಾಹುಗಳಲ್ಲಿ ಎತ್ತಿ ತಂದು ಬಿಟ್ಟನು. ಅಗ್ನಿಪರೀಕ್ಷೆಯಲ್ಲಿ ತನ್ನ ನಿರಪರಾಧವನ್ನು ತೋರಿಸಿದ ಸೀತೆಯನ್ನು ರಾಮ ಸ್ವಾಗತಿಸಿದನು. ರಾಮನ ನಡತೆಯನ್ನು ಸೀತೆ ಕ್ಷಮಿಸಿದಳು. ಯುದ್ಧವನ್ನು ಗೆದ್ದು, ರಾವಣನನ್ನು ಸೋಲಿಸಿ, ಸೀತೆಯನ್ನು ಮರಳಿ ಪಡೆದು, ರಾಮ ವಿಜೃಂಭಣೆಯಿಂದ ಅಯೋಧ್ಯೆಗೆ ಮರಳಿ ಭರತ ಮತ್ತು ಅಯೋಧ್ಯೆಯ ಜನರ ಅಪಾರ ಸಂತೋಷಕ್ಕೆ ರಾಜ್ಯಭಾರವನ್ನುವಹಿಸಿಕೊಂಡನು.
                                     

6. ಸೀತಾ ಪರಿತ್ಯಾಗ

  • ಶ್ರೀರಾಮನ ಆಳ್ವಿಕೆಯಲ್ಲಿ ಅಯೋಧ್ಯೆಯಲ್ಲಿ ಸುಖ, ಸಮೃದ್ಧಿಗಳು ನೆಲಸಿದ್ದವು. ಪ್ರಜೆಗಳು ಆನಂದದಿಂದಿದ್ದರು. ಆದರೆ ಈ ನೆಮ್ಮದಿ ಶಾಶ್ವತವಾಗಿ ಉಳಿಯಲಿಲ್ಲ. ರಾವಣನ ಸೆರೆಯಲ್ಲಿ ಬಹಳ ಕಾಲವಿದ್ದ ಸೀತೆಯ ಪಾವಿತ್ರ್ಯದ ಬಗೆಗೆ ಜನರು ಅನುಮಾನದಿಂದ ಮಾತಾಡತೊಡಗಿದರು. ಈ ವಿಷಯ ಗೂಢಚಾರರಿಂದ ರಾಮನಿಗೂ ತಿಳಿದು ಬಂದಿತು. ರಾಜ್ಯದಲ್ಲಿ ಉಂಟಾದ ಬರಗಾಲಕ್ಕೂ ಸೀತೆಯಿಂದಾಗಿರುವ ತಪ್ಪೇ ಕಾರಣವೆಂದು ಜನ ಗುಸುಗುಸು ಮಾತಾಡ ತೊಡಗಿದರು.
  • ಈ ದೃಶ್ಯವನ್ನು ಕಂಡು ರಾಮ ಸೀತೆಯನ್ನು ಅನುಮಾನಿಸಿದ್ದಕ್ಕಾಗಿ ಪಶ್ಚಾತ್ತಾಪ ಪಡುತ್ತಾನೆ. ಆಗ ಮುನಿಗಳು ರಾವಣನ ಸಂಹಾರದ ನಿಮಿತ್ತಕ್ಕಾಗಿ ಸೀತೆಯ ಅವತಾರವಾಗಿತ್ತು. ತನ್ನ ಕಾರ್ಯ ಮುಗಿದಿದ್ದರಿಂದ ಅವಳು ಹೋಗಿದ್ದಾಳೆ. ನೀನು ದುಃಖಿಸಬೇಡ ಎಂದು ರಾಮನನ್ನು ಸಮಾಧಾನಿಸುತ್ತಾರೆ.
  • ತಾನು ಪತಿವ್ರತೆಯೇ ಆಗಿದ್ದಲ್ಲಿ, ಭೂಮಿ ಬಾಯಿ ಬಿರಿಯಲಿ, ನನ್ನನ್ನು ನಿನ್ನೊಂದಿಗೆ ಕರೆದುಕೊಂಡು ಹೋಗು ಎಂದು ಕೇಳಿಕೊಳ್ಳುತ್ತಾಳೆ. ಎಲ್ಲರೂ ನೋಡುತ್ತಿರುವಂತೆಯೇ ಭೂಮಿ ದೊಡ್ಡ ಸದ್ದಿನೊಂದಿಗೆ ಬಾಯಿ ಬಿಡುತ್ತದೆ. ಅಲ್ಲಿ ಸೀತೆಗಾಗಿ ಸಿಂಹಾಸನವೊಂದು ಪ್ರತ್ಯಕ್ಷವಾಗುತ್ತದೆ. ಸೀತೆಯ ತಾಯಿಯಾದ ಭೂದೇವಿಯು ತನ್ನ ಮಗಳನ್ನು ಅಪ್ಪಿಕೊಂಡು ಭೂಮಿ ಒಳಗೆ ಕರೆದುಕೊಂಡು ಹೋಗುತ್ತಿದ್ದಂತೆ ಭೂಮಿ ಮುಚ್ಚಿಕೊಳ್ಳುತ್ತದೆ.
  • ಈ ಯಾಗಕ್ಕೆ ತನ್ನ ದೇಶದ ಎಲ್ಲಾ ಪ್ರಜೆಗಳಿಗೂ, ಋಷಿ ಮುನಿಗಳಿಗೂ ಆಹ್ವಾನವಿರುತ್ತದೆ. ವಾಲ್ಮೀಕಿ ಮುನಿಗಳು ಲವ-ಕುಶರೊಡನೆ ಈ ಯಾಗಕ್ಕೆ ಹೋಗಿರುತ್ತಾರೆ. ಯಾಗದ ದಿನ ಲವ-ಕುಶರಿಬ್ಬರು ರಾಮನ ಎದುರು ವಾಲ್ಮೀಕಿ ಋಷಿಗಳಿಂದ ರಾಮಾಯಣವನ್ನು ಹಾಡುತ್ತಾರೆ. ರಾಮನಿಗೆ ಆ ಗಾಯನದ ಮೂಲಕ ತನ್ನದೇ ಕಥೆಯನ್ನು ಕೇಳಿ ಸೋಜಿಗವಾಗುತ್ತದೆ. ವಾಲ್ಮೀಕಿಯಿಂದ ರಾಮನಿಗೆ ಲವ,ಕುಶರು ತನ್ನ ಮಕ್ಕಳೆಂದು ತಿಳಿಯುತ್ತದೆ.
  • ತನ್ನ ಪ್ರಜೆಗಳನ್ನು ಸಂತೋಷಡಿಸಲು ರಾಮ ಸೀತೆಯನ್ನು ತ್ಯಜಿಸಲು ನಿರ್ಧರಿಸಿದನು. ಸೀತೆಯು ವನವಾಸ ಕಾಲದಲ್ಲಿ ರಾಮನೊಡನೆ ಸಂತೋಷದಿಂದ ಕಾಲಕಳೆದ ಅರಣ್ಯಕ್ಕೆ ಮತ್ತೊಮ್ಮೆ ಹೋಗಬೇಕಾಯಿತು. ತುಂಬು ಗರ್ಭಿಣಿಯಾದ ಸೀತೆಯನ್ನು, ವಿಹಾರದ ನೆಪ ಹೇಳಿ ರಾಮ ಲಕ್ಷ್ಮಣನೊಂದಿಗೆ ಅವಳನ್ನು ಕಾಡಿಗೆ ಕಳುಹಿಸಿ ಅವಳನ್ನು ಅಲ್ಲೆ ಬಿಟ್ಟು ಬರುವಂತೆ ತಿಳಿಸಿ ಪ್ರಜಾಪ್ರೇಮವನ್ನು ಮೆರೆಯುತ್ತಾನೆ.
  • ಸೀತೆಯು ವಾಲ್ಮೀಕಿ ಮುನಿಗಳ ಆಶ್ರಮದಲ್ಲಿರುವ ವಿಷಯ ತಿಳಿದು, ಅವಳನ್ನು ತಾನಿರುವಲ್ಲಿಗೆ ಬರುವಂತೆ ಹೇಳಿ ಕಳಿಸುತ್ತಾನೆ. ವಾಲ್ಮೀಕಿ ಮುನಿಯು ಸೀತೆಯನ್ನು ಆಶ್ರಮ ದಿಂದ ಕರೆದು ಕೊಂಡು ಬರುತ್ತಾನೆ. ಆಗ ರಾಮ ಸೀತೆಯು ಮತ್ತೊಂದು ಪರೀಕ್ಷೆಯ ಮೂಲಕ ತನ್ನ ಮೇಲಿರುವ ಕಳಂಕದಿಂದ ದೂರಾಗಬೇಕೆಂದು ಹೇಳುತ್ತಾನೆ. ರಾಮನ ಮಾತುಗಳನ್ನು ಕೇಳಿ ಸೀತೆಯನ್ನು ದು:ಖ ಆವರಿಸುತ್ತದೆ.ಆಗ ಸೀತೆಯು ತನ್ನ ತಾಯಿಯಾದ ಭೂದೇವಿಯಲ್ಲಿ ಹೀಗೆ ಕೇಳಿಕೊಳ್ಳುತ್ತಾಳೆ.
  • ವಾಲ್ಮೀಕಿ ಲವ-ಕುಶರಿಗೆ ಗುರುವಾಗಿ ಸಕಲ ವಿದ್ಯೆಗಳನ್ನು ಹೇಳಿಕೊಡುತ್ತಾನೆ. ಲವ-ಕುಶರು ಬೆಳೆದು ಎಂಟು ವರ್ಷದವರಾಗಿದ್ದರು Ẋಇಪ್ಪತ್ತು ವರ್ಷದ ಯುವಕರಾಗಿದ್ದರುẊ. ಅದೇ ಸಮಯದಲ್ಲಿ ರಾಮನನ್ನು ಒಂದು ಚಿಂತೆ ಕಾಡುತ್ತಿತ್ತು. ಬ್ರಾಹ್ಮಣನ ಮಗನಾಗಿದ್ದ ರಾವಣನನ್ನು ಕೊಂದಿರುವುದರಿಂದ ತನಗೆ ಬಂದಿರಬಹುದಾದ ಬ್ರಹ್ಮ ಹತ್ಯೆ ಎಂಬ ಪಾಪವನ್ನು ಕಳೆದುಕೊಳ್ಳಲು ನಿಶ್ಚಯಿಸಿದನು. ಅದಕ್ಕಾಗಿ ಅಶ್ವಮೇಧ ಯಾಗ ಮಾಡಬೇಕೆಂದು ನಿರ್ಧರಿಸಿದನು.
  • ಜನಾಪವಾದದಿಂದ ರಾಮ ತನ್ನನ್ನು ತ್ಯಜಿಸಿರುವನೆಂಬ ಸುದ್ದಿಯಿಂದ ಸೀತೆ ದು:ಖತಪ್ತ ಳಾಗಿ ಕಲ್ಲು ಕರಗುವಂತೆ ರೋದಿಸುತ್ತಾಳೆ. ನಂತರ ರಾಮನಿಂದ ಪರಿತ್ಯಕ್ತೆಯಾದ ಸೀತೆಗೆ ವಾಲ್ಮೀಕಿ ಮುನಿಯು ತನ್ನ ಆಶ್ರಮದಲ್ಲಿ ಆಶ್ರಯ ನೀಡಿದನು. ಸೀತೆ ವಾಲ್ಮೀಕಿ ಮುನಿಯ ಆಶ್ರಮದಲ್ಲಿ ಲವ ಮತ್ತು ಕುಶ ಎಂಬ ಅವಳಿ-ಜವಳಿ ಗಂಡು ಮಕ್ಕಳಿಗೆ ಜನ್ಮ ನೀಡುತ್ತಾಳೆ. ಸೀತೆಯು ವಾಲ್ಮೀಕಿ ಮುನಿಯ ಸಹಾಯದಿಂದ ಮಕ್ಕಳನ್ನು ಬೆಳೆಸಿ ದೊಡ್ಡವರನ್ನಾಗಿ ಮಾಡುತ್ತಾಳೆ.


                                     

7. ನಾರದನ ಹೇಳುವ ಆದರ್ಶ ಮನುಷ್ಯನ ೧೬ ಗುಣಗಳು

  • ಕಸ್ಯ ಬಿಭ್ಯತಿ ದೇವಾಶ್ಚ ಜಾತರೋಶಸ್ಯ ಸಂಯುಗೆ - ಯಾರ ಕೋಪಕ್ಕೆ ದೇವತೆಗಳೂ ಹೆದರುವರೋ ಅಂಥವನು.
  • ಧರ್ಮಜ್ಞ - ಧರ್ಮವನ್ನು ತಿಳಿದವನು
  • ಆತ್ಮವಂತ – ಧೈರ್ಯಸ್ಥ
  • ವಿದ್ವಾನ್ - ಎಲ್ಲ ವಿದ್ಯೆಗಳನ್ನು ಬಲ್ಲವನು
  • ಅನಸೂಯಕ – ಅಸೂಯೆ ಇಲ್ಲದವನು,
  • ಸತ್ಯವಾಕ್ಯ – ಸತ್ಯವನ್ನು ನುಡಿಯುವವನು
  • ಸರ್ವಭೂತಹಿತ – ಎಲ್ಲ ಜೀವಿಗಳ ಹಿತವನ್ನು ಬಯಸುವವನು
  • ಚರಿತ್ರವಾನ್ – ಒಳ್ಳೆಯ ನಡತೆಯುಳ್ಳವನು,
  • ಜಿತಕ್ರೋಧ – ಕೋಪವನ್ನು ಗೆದ್ದವನು
  • ಗುಣವಾನ್ - ನೀತಿವಂತ
  • ಧೃಡವೃತ – ಮನೋನಿಶ್ವಯಕ್ಕೆ ಒಳಗಾದವನು
  • ದ್ಯುತಿಮಾನ್ – ಕಾಂತಿಯುಳ್ಳವನು,
  • ಸಮರ್ಥ – ಸಮರ್ಥನು
  • ವೀರ್ಯವಾನ್- ಶೂರ
  • ಸದೈಕ ಪ್ರಿಯದರ್ಶನ – ನೋಡಲು ಕಣ್ಣುಗಳಿಗೆ ಸದಾ ಸುಖಕರನು
  • ಕೃತಜ್ಞ - ಮಾಡಿದ ಸಹಾಯ/ಉಪಕಾರವನ್ನು ನೆನಪಿನಲ್ಲಿಟ್ಟು ಕೊಳ್ಳುವವನು
ಅತಿಕಾಯ
                                               

ಅತಿಕಾಯ

ಅತಿಕಾಯ ಇವನು ರಾಮಾಯಣದಲ್ಲಿ ಲಂಕೆಯ ಅರಸ ರಾವಣನ ಮಗ. ಇವನು ಅತ್ಯಂತ ಪರಾಕ್ರಮಿಯಾಗಿದ್ದು, ಬ್ರಹ್ಮನನ್ನು ಒಲಿಸಿ ಬ್ರಹ್ಮಾಸ್ತ್ರವನ್ನು ಪಡೆದಿದ್ದನು. ರಾಮ-ರಾವಣರ ಯುದ್ಧದಲ್ಲಿ ಇದನ್ನು ಲಕ್ಷ್ಮಣನ ಮೇಲೆ ಪ್ರಯೋಗಿಸಿ ಅವನನ್ನು ಮೂರ್ಚಿತನನ್ನಾಗಿ ಮಾಡಿದವನು. ಕೊನೆಗೆ ಲಕ್ಶ್ಮಣನ ಕೈಯಲ್ಲಿ ಹತನಾದನು.

ಹಿರೇಮಗಳೂರು
                                               

ಹಿರೇಮಗಳೂರು

{{#if:| ಹಿರೇಮಗಳೂರು, ಚಿಕ್ಕಮಗಳೂರಿನ ಹೊರ ವ್ಯಾಪ್ತಿಯಲ್ಲಿರುವ ಒಂದು ಚಿಕ್ಕ ಹಳ್ಳಿ. ಸಖರಾಯ ಮಹಾರಾಜರು ತಮ್ಮ ಹೆಣ್ಣು ಮಕ್ಕಳ ಮದುವೆಯ ವೇಳೆ ವರದಕ್ಷಿಣೆಯಾಗಿ ನೀಡಿದ ಎರಡು ಹಳ್ಳಿಗಳಲ್ಲಿ ಇದೂ ಒಂದು. ಹಿರೇಮಗಳೂರು ಶಬ್ದವು ಹಿರೇ-ಹಿರಿಯ ಹಾಗು ಮಗಳು ಪದಗಳಿಂದ ಬಂದಿದೆ. ವರದಕ್ಷಿಣೆಯಾಗಿ ನೀಡಿದ ಇನ್ನೋಂದು ಊರು ಚಿಕ್ಕಮಗಳೂರು. ಹಿರೇಮಗಳೂರಿನಲ್ಲಿ ಕೋದಂಡ ರಾಮ ದೇವಾಲಯವಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಹಿರೇಮಗಳೂರು ಕಣ್ಣನ್ ಅವರು ಈ ದೇವಾಲಯದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ದೇವಾಲಯದ ವಿಶೇಷತೆ ಏನೆಂದರೆ, ಇಲ್ಲಿಯ ದೇವರಿಗೆ ಕನ್ನಡ ಮಂತ್ರಗಳ ಮೂಲಕ ಪೂಜೆ ಸಲ್ಲಿಸಲಾಗುತ್ತದೆ.

Free and no ads
no need to download or install

Pino - logical board game which is based on tactics and strategy. In general this is a remix of chess, checkers and corners. The game develops imagination, concentration, teaches how to solve tasks, plan their own actions and of course to think logically. It does not matter how much pieces you have, the main thing is how they are placement!

online intellectual game →